ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ್ದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿದ್ದ ಸಿ.ಪಿ.ಯೋಗೇಶ್ವರ್, ಮಹತ್ವದ ಬೆಳವಣಿಗೆಯೊಂದರಲ್ಲಿ ಇಂದು ದಿಢೀರ್ ಆಗಿ ಸಿಎಂ ಬೊಮ್ಮಾಯಿ ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ಹೊತ್ತಲ್ಲೇ ಮಾಜಿ ಸಚಿವರ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸಕ್ಕೆ ಆಗಮಿಸಿದ ಯೋಗೇಶ್ವರ್, ಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಚಿವ ಸ್ಥಾನಕ್ಕಾಗಿ ಮತ್ತೆ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.
ಮುಂದಿನ ವಾರ ಸಿಎಂ ಬೊಮ್ಮಾಯಿ ಎರಡು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದು, ಈ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಇದೀಗ ಸಿ.ಪಿ.ಯೋಗೇಶ್ವರ್ ಸಿಎಂ ಭೇಟಿ ಮಹತ್ವ ಪಡೆದುಕೊಂಡಿದೆ.
ಪ್ರಧಾನಿ ಮೋದಿಯವರನ್ನು ಹೀಗೆ ಬಿಟ್ಟರೆ ಜನರು ಭಿಕ್ಷೆ ಬೇಡುವ ಸ್ಥಿತಿ ಬರುತ್ತೆ; ಸಿದ್ದರಾಮಯ್ಯ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ