ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈಗ ನೀಡಲಾಗುತ್ತಿರುವ 1500 ಕೋಟಿ ರೂ.ಖರ್ಚನ್ನು ಕಾಲಮಿತಿಯೊಳಗೆ ಸಮರ್ಪಕವಾಗಿ ಖರ್ಚು ಮಾಡಿದಲ್ಲಿ ಮುಂದಿನ ವರ್ಷ 3 ಸಾವಿರ ಕೋಟಿ ರೂ. ವಿಶೇಷ ಅನುದಾನವನ್ನು ಒದಗಿಸುವುದಕ್ಕೆ ನಮ್ಮ ಸರಕಾರ ಸಿದ್ಧವಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಆರ್.ವೈ.ಎಂ.ಇ.ಸಿ ಕಾಲೇಜು ಆವರಣದಲ್ಲಿರುವ ಎಸ್.ಕೆ.ಮೋದಿ ನ್ಯಾಷನಲ್ ಸ್ಕೂಲ್ ,ವಿವಿ ಸಂಘದ ಕಿಂಡರ್ ಗಾರ್ಡನ್ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮತ್ತು ಎಸ್.ಕೆ.ಮೋದಿ ಅವರ ಪ್ರತಿಮೆಯನ್ನು ಭಾನುವಾರ ಅನಾವರಣಗೊಳಿಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ 1500 ಕೋಟಿ ರೂ. ಅನುದಾನವನ್ನು ಇದುವರೆಗೆ ಖರ್ಚು ಮಾಡಿಲ್ಲ. ಹೀಗಾಗಿ ವಿಶೇಷ ಯೋಜನೆಗಳನ್ನು ರೂಪಿಸಿ. ಯೋಜನೆ ರೂಪಿಸಿ. ದದಕ್ಕೆ ಅಗತ್ಯ ಸಹಕಾರವನ್ನು ಸರಕಾರ ನೀಡಲಿದೆ. ಸಮರ್ಪಕವಾಗಿ ಅನುದಾನ ಬಳಕೆ ಮಾಡುವುದರ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ರೀತಿ ಕೆಲಸ ಮಾಡಿ ಎಂದರು.
ಅಭಿವೃದ್ಧಿ ನಕ್ಷೆಯಲ್ಲಿ ಬಳ್ಳಾರಿ ಜಿಲ್ಲೆಗೆ ಪ್ರಮುಖ ಸ್ಥಾನವಿದೆ. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಿದೆ. ಅಭಿವೃದ್ಧಿ ಎಂಬುದು ನಿರಂತರವಾಗಿರಬೇಕು. ನೈಸರ್ಗಿಕ ಸಂಪತ್ತು ಮುಂದಿನ ಪೀಳಿಗೆಗೆ ತಲುಪಬೇಕು ಎಂದರು.
ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ; ಸಿಎಂ ಆಗಿರುವುದು ದೈವಿಚ್ಛೆ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ನಮ್ಮ ಹೈಕಮಾಂಡ್ ಕಾರಣ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಸಂಜಯ್ ಪಾಟೀಲ್ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಮುಖಂಡರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ