ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅಕ್ಟೋಬರ್ 4ರಿಂದ 6ರವರೆಗೂ ಕರ್ನಾಟ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದ್ದು, ಶಾಹೀನ್ ಚಂಡಮಾರುತ ಪೂರ್ವ ಹಾಗೂ ಮಧ್ಯ ಅರಬ್ಬಿ ಸಮುದ್ರದ ಮೂಲಕ ಹಾದುಹೋಗಲಿದೆ ಎಂದು ತಿಳಿಸಿದೆ.
ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, 24 ಗಂಟೆಯಲ್ಲಿ ಇನ್ನಷ್ಟು ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕೊಂಕಣ, ಗೋವಾ, ದಕ್ಷಿಣ ಮಧ್ಯ ಮಹಾರಾಷ್ಟ್ರ, ಕೇರಳ, ತಮಿಳುನಾಡಿನಲ್ಲಿ ಅಧಿಕ ಮಳೆಯಾಗಲಿದೆ.
ಗುಲಾಬ್ ಚಂಡಮಾರುತದ ಅಬ್ಬರ ಕಡಿಮೆಯಾಗುತ್ತಿದ್ದಂತೆ ಶಾಹೀನ್ ಚಂಡಮಾರುತ ಆರಂಭವಾಗಿ ಆಂಧ್ರಪ್ರದೇಶ, ಓಡಿಶಾ, ತೆಲಂಗಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಭಾರಿ ಮಳೆಗೆ ಕಾರಣವಾಗಿತ್ತು. ಈ ಚಂಡಮಾರುತದ ಪ್ರಭಾವದಿಂದಾಗಿಯೇ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಾಹೀನ್ ಚಂಡಮಾರುತ ಅ.4ರಂದು ಮುಂಜಾನೆ ಒಮಾನ್ ಕರಾವಳಿಯನ್ನು ದಾಟಲಿದ್ದು, ಈ ವೇಳೆ ಗಾಳಿಯ ವೇಗ 80-90 ಕಿ.ಮೀ ಇರಲಿದೆ. ಒಮಾನ್ ನಲ್ಲಿ ಹೈಲರ್ಟ್ ಘೋಷಿಸಲಾಗಿದೆ.
ಭವಾನಿಪುರದಲ್ಲಿ ಜಯಭೇರಿ ಬಾರಿಸಿದ ಮಮತಾ ಬ್ಯಾನರ್ಜಿ; ಸಿಎಂ ಕುರ್ಚಿ ಭದ್ರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ