Latest

ಒಂದೇ ಗ್ರಾಮದಲ್ಲಿ ಮೂವರು ಬಾಲಕಿಯರ ಸಾವು

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿವೆ. ಈ ನಡುವೆ ತೀವ್ರ ಜ್ವರದಿಂದ ಬಳಲುತ್ತಿದ್ದ ಒಂದೇ ಗ್ರಾಮದ ಮೂವರು ಬಾಲಕಿಯರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಆನೂರ ಗ್ರಾಮದಲ್ಲಿ ನಡೆದಿದೆ.

ಕೇವಲ 15 ದಿನಗಳ ಅಂತರದಲ್ಲಿ ಮೂವರು ಬಾಲಕಿಯರು ಜ್ವರಕ್ಕೆ ಬಲಿಯಾಗಿರುವುದು ಜಿಲ್ಲೆಯಲ್ಲಿ ಆತಂಕವನ್ನು ಹೆಚ್ಚಿಸಿದೆ. 11 ವರ್ಷದ ಅನುಶ್ರೀ ಸಿಂಘೆ, 9 ವರ್ಷದ ಸಂಗಮ್ಮ ತೆಲ್ಲೂರ್, 12 ವರ್ಷದ ಚೈತ್ರಾ ಮೃತ ಬಾಲಕಿಯರು.

ಬಾಲಕಿಯರು ಎರಡು ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು, ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗ್ರಾಮದ ಹಲವು ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡಿದೆ. ಕುಡಿಯುವ ನೀರು ಕಲುಷಿತಗೊಂಡು ಮಕ್ಕಳು ಅನಾರೋಗ್ಯಕ್ಕೀಡಾಗಿರುವ ಸಾಧ್ಯತೆ ದಟ್ಟವಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button