Kannada NewsLatest

2 ವಾರಗಳ ಕಾಲ ಬೆಳಗಾವಿಯಲ್ಲಿ ಅಧಿವೇಶನ; ಹೊರಟ್ಟಿ ಮಾಹಿತಿ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಸುವರ್ಣ ಸೌಧದಲ್ಲಿಯೇ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ, ಸ್ಪೀಕರ್ ಕಾಗೇರಿ ಅವರ ಜೊತೆ ಮಾತನಾಡಿದ್ದೇನೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 2ನೇ ವಾರದಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶ ನಡೆಯಲಿದೆ. ಸುಮಾರು 2 ವಾರಗಳ ಕಾಲ ಬೆಳಗಾವಿಯಲ್ಲೇ ಅಧಿವೇಶನ ನಡೆಯಲಿದೆ ಎಂದರು.

ಸುಮಾರು 3 ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದೇ ಇಲ್ಲ. ಹೀಗಾಗಿ ಈ ಬಾರಿ ಬೆಳಗಾವಿಯಲ್ಲಿ ಅಧಿವೇಶನ ಮಾಡಲಿದ್ದೇವೆ ಎಂದು ಹೇಳಿದರು.

ನಿಮ್ಮಪ್ಪನೇ ಹೊಗಳಿದ್ದರು, ನಿಮ್ಮದೇನು? ಎಂದ ಸಿ.ಸಿ.ಪಾಟೀಲ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button