
ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್ ಎಂ ಕೃಷ್ಣ ಉದ್ಘಾಟಿಸಿದರು.
ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ 411ನೇ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಅವರ ಪತ್ನಿ ಚೆನ್ನಮ್ಮ , ಸಚಿವರಾದ ಆರ್ ಅಶೋಕ್, ಬೈರತಿ ಬಸವರಾಜ್, ಎಸ್ ಟಿ ಸೋಮಶೇಖರ್, ಬಿಸಿ ಪಾಟೀಲ್, ಸುನಿಲ್ ಕುಮಾರ್, ಶಶಿಕಲಾ ಜೊಲ್ಲೆ, ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ಜಿಟಿ ದೇವೇಗೌಡ , ತನ್ವೀರ್ ಸೇಠ್ ಮತ್ತು ಇತರರು ಉಪಸ್ಥಿತರಿದ್ದರು.
ಕೃಷ್ಣರಾಜ ಸಾಗರ ಡ್ಯಾಮ್ ಬಳಿ ಇಂದು ಮುಂಜಾನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಂಪತಿ ಸಮೇತ ಕಾವೇರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಚನ್ನಮ್ಮ ಜತೆ ಸಿಎಂ ಸಾಂಪ್ರದಾಯಿಕ ಉಡುಗೆಯಾದ ರೇಷ್ಮೆ ಪಂಚೆ ಹಾಗೂ ಶರ್ಟ್ ತೊಟ್ಟು ಪೂಜೆ ಸಲ್ಲಿಸಿದರು. ಸಕಲ ಧಾರ್ಮಿಕ ಸಂಪ್ರದಾಯದೊಂದಿಗೆ ದಂಪತಿಗಳು ಪೂಜೆ ಸಲ್ಲಿಸಿದರು. ನಂತರ ದಸರಾ ಉದ್ಘಾಟನೆಗಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ಬೈರತಿ ಬಸವರಾಜ್, ಸುನಿಲ್ ಕುಮಾರ, ಶಾಸಕ ಅರವಿಂದ ಬೆಲ್ಲದ ಮತ್ತು ಇತರರು ಉಪಸ್ಥಿತರಿದ್ದರು.
ಇಂದು ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ