The loss of lives due to a house collapse in Belagavi, Karnataka is saddening. My thoughts are with the bereaved kin in this hour of sadness. An ex-gratia of Rs. 2 lakh each from PMNRF would be paid to the next of kin of the deceased: PM @narendramodi
— PMO India (@PMOIndia) October 7, 2021
ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿಯಲ್ಲಿ ಮನೆ ಕುಸಿದು 7 ಜನರು ಸಾವಿಗೀಡಾಗಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.
ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಬೆಳಗಾವಿಯಲ್ಲಿ ಮನೆ ಕುಸಿತದಿಂದ ಜೀವಹಾನಿಯಾಗಿರುವುದು ದುಃಖಕರವಾಗಿದೆ. ಸಂಬಂಧಿಕರ ದುಃಖದ ಈ ಸಮಯದಲ್ಲಿ ನಾನು ಭಾಗಿಯಾಗುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರ ಸಂಬಂಧಿಕರಿಗೆ ತಲಾ 2 ಲಕ್ಷವನ್ನು ರೂ.ಗಳ ಪರಿಹಾರನೀಡಲಾಗುವುದು ಎಂದು ಮೋದಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ ಗಳನ್ನು ನೀಡುವುದಾಗಿ ತಿಳಿಸಿದ್ದಾರೆ. ಆದರೆ ತಲಾ 10 ಲಕ್ಷ ರೂ. ಪರಿಹಾರ ನೀಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.
ಮನೆ ಕುಸಿತಕ್ಕೆ 7 ಜನರ ಬಲಿ: ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ ಶಾಸಕಿ ಹೆಬ್ಬಾಳಕರ್
ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಂಡ ಶಾಸಕಿ; ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ