Kannada NewsKarnataka NewsLatest

ಮೃತರ ಕುಟುಂಬಕ್ಕೆ 35 ಲಕ್ಷ ರೂ ಚೆಕ್ ವಿತರಿಸಿದ ಕಾರಜೋಳ

ಬಡಾಲ ಅಂಕಲಗಿ ದುರಂತ: ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಧಾರಾಕಾರ ಮಳೆಯಿಂದ ಮನೆ ಗೋಡೆ ಕುಸಿದು ಒಂದೇ ಕುಟುಂಬದ ೭ ಜನರು ಮೃತಪಟ್ಟಿರುವ ಬಡಾಲ ಅಂಕಲಗಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಗುರುವಾರ(ಅ.೭) ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಮನೆಯ ಗೋಡೆ ಕುಸಿದು ಏಳು ಜನರು ಪ್ರಾಣ ಕಳೆದುಕೊಂಡಿರುವುದು ಬಹಳ ನೋವಿನ ಸಂಗತಿ. ನಾವು ಸರ್ಕಾರದಿಂದ ಪರಿಹಾರ ಕೊಡಬಹುದು; ಆದರೆ ಪ್ರಾಣ ಕೊಡಲು ಸಾಧ್ಯವಿಲ್ಲ. ದೇವರು ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ, ಕುಟುಂಬಸ್ಥರ ನೆರವಿಗೆ ಸರ್ಕಾರವಿದೆ” ಎಂದು ತಿಳಿಸಿದರು.

ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ:

ಮೃತರ ಕುಟುಂಬದ ವಾರಸುದಾರರಾದ ಭೀಮಪ್ಪ ಖನಗಾವಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಇದೇ ಸಂದರ್ಭದಲ್ಲಿ ಒಟ್ಟು ೩೫ ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ ೨ ಲಕ್ಷದಂತೆ ೭ ಜನರಿಗೆ ೧೪ ಲಕ್ಷ ಪರಿಹಾರ ಘೋಷಣೆ ಮಾಡಿರುತ್ತಾರೆ. ಘಟನೆಗೆ ತಕ್ಷಣವೇ ಸ್ಪಂದಿಸಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಅಪಾಯಕಾರಿ ಮನೆ-ಶಾಲೆಗಳ ಸಮೀಕ್ಷೆಗೆ ಸೂಚನೆ:

ಈ ಭಾಗದಲ್ಲಿನ ಅನೇಕ ಮನೆಗಳು ಬಿದಿದ್ದು, ಮಣ ನ ಮನೆಗಳು ಹೆಚ್ಚಾಗಿವೆ. ಅಪಾಯದ ಸ್ಥಿತಿಯಲ್ಲಿರುವ ಮನೆಗಳು ಹಾಗೂ ಶಾಲೆಗಳನ್ನು ಸಮೀಕ್ಷೆ ಮಾಡಿ ತಕ್ಷಣ ಜನರನ್ನು ರಕ್ಷಿಸಿ ಸ್ಥಳಾಂತರಿಸಲು ಪಿಡಿಓಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕಾರಜೋಳ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಮೃತ ಕುಟುಂಬದ ವ್ಯಕ್ತಿಗೆ ಸ್ಥಳೀಯ ವಸತಿ ನಿಲಯದಲ್ಲಿ ಉದ್ಯೋಗ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್.ವಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಳಗಾವಿ ಸಂಸದರಾದ ಮಂಗಳಾ ಸುರೇಶ್ ಅಂಗಡಿ ಅವರು ಕೂಡ ಬಡಾಲ ಅಂಕಲಗಿ ಗ್ರಾಮಕ್ಕೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತರ ವಾರಸುದಾರರಿಗೆ ಎಲ್ಲ ರೀತಿಯ ನೆರವು ಸರಕಾರ ನೀಡಲಿದ್ದು, ಧೈರ್ಯದಿಂದ ಇರುವಂತೆ ತಿಳಿಸಿದರು.

ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಂಡ ಶಾಸಕಿ; ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮನೆ ಕುಸಿತಕ್ಕೆ 7 ಜನರ ಬಲಿ: ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ ಶಾಸಕಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button