Latest

ಚಿಕ್ಕೋಡಿ: ನಾಳೆ ಜೊಲ್ಲೆ ನಾಮಪತ್ರ ಸಲ್ಲಿಕೆ, ಸಂಜೆ ಸಮಾವೇಶ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ,

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ ಜೊಲ್ಲೆ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ,  ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ತಿಳಿಸಿದ್ದಾರೆ.

Home add -Advt

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೇರಿದಂತೆ ಹಲವಾರು ನಾಯಕರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಕಳೆದ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಲ್ಲಿ ಅಲ್ಪ ಅಂತರದಿಂದ ಸೋತಿದ್ದ ಬಿಜೆಪಿ ಈ ಬಾರಿ ಭಾರೀ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದೂ ಅವರು ಹೇಳಿದರು.

ಮಾಜಿ ಸಚಿವ ಶಶಿಕಾಂತ ನಾಯಿಕ, ಬಸವಪ್ರಭು ಜೊಲ್ಲೆ ಇದ್ದರು. 

ಚಿಕ್ಕೋಡಿಗೆ ಜೊಲ್ಲೆ, ಕೊಪ್ಪಳಕ್ಕೆ ಕರಡಿ, ರಾಯಚೂರಿಗೆ ಅಮರೇಶ್

 

Related Articles

Back to top button