ಪ್ರಗತಿವಾಹಿನಿ ಸುದ್ದಿ, ಗೋಕಾಕ :
ಅರಭಾವಿ ಮತಕ್ಷೇತ್ರದ ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಕೂಡಲೇ ಘಟಪ್ರಭಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡುವಂತೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಂಗಳವಾರ ಹೇಳಿಕೆಯೊಂದನ್ನು ನೀಡಿರುವ ಅವರು, ಎಪ್ರಿಲ್ 10ರೊಳಗೆ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರನ್ನು ಹರಿಸುವಂತೆ ಆಗ್ರಹಿಸಿದ್ದಾರೆ.
ಈಗಾಗಲೇ ಹಿಡಕಲ್ ಜಲಾಶಯದಲ್ಲಿ 9.86 ಟಿಎಂಸಿ ನೀರು ಸಂಗ್ರಹವಿದೆ. ಅರಭಾವಿ ಕ್ಷೇತ್ರಾದ್ಯಂತ ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಜನ ಹಾಗೂ ಜಾನುವಾರುಗಳ ಹಿತದೃಷ್ಟಿಯಿಂದ ನೀರನ್ನು ಹರಿಸುವುದು ಅತ್ಯವಶ್ಯವಾಗಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಎ.10 ರೊಳಗೆ ಹಿಡಕಲ್ ಜಲಾಶಯದಿಂದ ಎರಡೂ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಿಸಿ ಸಾರ್ವಜನಿಕರ ಹಿತ ಕಾಪಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ