Latest

ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ಬಂಧಿಸಿದ್ದು, ಬರೋಬ್ಬರಿ 5 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿದೆ.

ಆರ್ ಸಿಬಿ ಹಾಗೂ ಕೆಕೆಆರ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ರಾಮಮೂರ್ತಿ ನಗರದ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಬಂಧಿತರಿಂದ 5 ಲಕ್ಷ ರೂಪಾಯಿ ಹಣ ಹಾಗು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಪ್ರತಿ ಬಾಲ್, ಓವರ್ ಹಾಗೂ ಪಂದ್ಯದ ಸೋಲು-ಗೆಲುವು ಲೆಕ್ಕಾಚಾರದಲ್ಲಿ ಆರೋಪಿಗಳು ಹಲವರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದರು.
ಕೊರೋನಾ ಸಂದರ್ಭದಲ್ಲೂ ಸಿಎಂಆರ್ ನಲ್ಲಿ ಶೇ.100ರಷ್ಟು ಕ್ಯಾಂಪಸ್ ನಿಯೋಜನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button