ರಸ್ತೆ, ಸಮುದಾಯ ಭವನ, ದಾಂಡಿಯಾಕ್ಕೆ ಚಾಲನೆ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರಿಸಿದ್ದಾರೆ.
ಸೋಮವಾರ ಸಂಜೆ ಸಹ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಮುತಗಾ ಗ್ರಾಮದ ರಸ್ತೆಯ ಕಾಮಗಾರಿ
ಮುತಾಗಾ ಗ್ರಾಮದ ಸಾಯಿ ನಗರದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ 17 ಲಕ್ಷ ರೂ,ಗಳ ಅನುದಾನದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಲಕ್ಷ್ಮಿ ಹೆಬ್ಬಾಳಕರ್ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ನಿವಾಸಿಗಳು, ಸಾಯಿ ನಗರ ಕ್ಷೇಮಾಭಿವೃದ್ಧಿ ಸಂಘದ ಎಲ್ಲ ಮುಖಂಡರು, ಸದಸ್ಯರು, ಎಚ್ ಆರ್ ನಂದುರಕರ್, ವೆಂಕಟೇಶ ತಿಗಡಿ, ರಮೇಶ ತೋಟಗಿ, ಮಹೇಶ ಪಾಟೀಲ ಹಾಗುಹ್ ಮುಂತಾದವರು ಉಪಸ್ಥಿತರಿದ್ದರು.
ಜೈನ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ
ಮುತಗಾ ಗ್ರಾಮದ ಭಗವಾನ್ ಶ್ರೀ 1008 ಪಾರ್ಶ್ವನಾಥ ದಿಗಂಬರ – ಜೈನ ಮಂದಿರದ ನೂತನ ಸಮುದಾಯ ಭವನದ ಕಟ್ಟಡ ನಿರ್ಮಾಣದ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಗ್ರಾಮಸ್ಥರ ಸಮ್ಮುಖದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು.
ಅಲ್ಪ ಸಂಖ್ಯಾತರ ಕಲ್ಯಾಣ ನಿಧಿಯ ವತಿಯಿಂದ 28 ಲಕ್ಷ ರೂ,ಗಳಲ್ಲಿ ಸಮುದಾಯ ಭವನ ನಿರ್ಮಾಣಗೊಳ್ಳಲಿದ್ದು, ಮೊದಲ ಕಂತಿನಲ್ಲಿ 14 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಲಾಗಿದೆ. ಉತ್ತಮ ಗುಣಮಟ್ಟ ಹಾಗೂ ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಮಾಡಿ ಮುಗಿಸಲು ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಜೈನ ಸಮಾಜದ ಮುಖಂಡರು, ತಾಲೂಕ ಪಂಚಾಯತ್ ಸದಸ್ಯ ಸುನೀಲ ಅಷ್ಟೇಕರ್, ತಾಲೂಕ ಪಂಚಾಯತ್ ಮಾಜಿ ಅಧ್ಯಕ್ಷ ಶ್ಯಾಮರಾವ್ ಪಾಟೀಲ, ಗ್ರಾಮ ಪಂಚಾಯತ್ ಸದಸ್ಯರಾದ ಶ್ಯಾಮ್ ಮುತಗೇಕರ್, ಸ್ನೇಹಲ್ ಪೂಜಾರಿ, ಜೈನ ಸಮಾಜದ ಎಲ್ಲ ಮಹಿಳೆಯರು ಹಾಗೂ ಇತರರು ಉಪಸ್ಥಿತರಿದ್ದರು.
ದಾಂಡಿಯಾಕ್ಕೆ ಚಾಲನೆ
ನಿಲಜಿ ಗ್ರಾಮದಲ್ಲಿ ನವರಾತ್ರಿಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಶ್ರೀ ದುರ್ಗಾಪೂಜಾ ಹಾಗೂ ದಾಂಡಿಯಾ ಕಾರ್ಯಕ್ರಮಕ್ಕೆ ಲಕ್ಷ್ಮಿ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದುರ್ಗಾದೇವಿ ಟ್ರಸ್ಟ್ ಕಮೀಟಿಯವರು, ಯುವತಿಯರು, ಯುವಕರು, ಮಹಿಳೆಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ