ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಕೆಪಿಸಿಸಿ ವೇದಿಕೆಯಲ್ಲಿಯೇ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರ ಆರೋಪ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿದ್ದು, ಇಬ್ಬರು ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
ಡಿ.ಕೆ.ಶಿವಕುಮಾರ್ ಕಮಿಷನ್ ಗಿರಾಕಿ ಎಂದಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ನಿಂದ 6 ವರ್ಷ ಉಚ್ಛಾಟನೆ ಮಾಡಲಾಗಿದೆ. ಇದೇ ವೇಳೆ ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಚರ್ಚೆ ವಿಚಾರ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ, ಕಾಂಗ್ರೆಸ್ ನಾಯಕರಾದ ಉಗ್ರಪ್ಪ ಹಾಗೂ ಸಲೀಂ ವಿರುದ್ಧ ಕ್ರಮ ಕೈಗೊಂಡಿದೆ.
ಡಿಕೆಶಿ ಕಲೆಕ್ಷನ್ ಗಿರಾಕಿ; ಕೆಪಿಸಿಸಿ ವೇದಿಕೆಯಲ್ಲೇ ಕಾಂಗ್ರೆಸ್ ನಾಯಕರಿಂದ ಚರ್ಚೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ