ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಬುಧವಾರ ಚಿಕ್ಕೋಡಿ ತಾಲೂಕಿನ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಭೇಟಿ ನೀಡಿ, ಶ್ರೀ ವೀರಭದ್ರೇಶ್ವರ ಹಾಗೂ ಭದ್ರಕಾಳೇಶ್ವರಿ ದೇವಿಯ ದರ್ಶನ ಪಡೆದರು.
ನವರಾತ್ರಿ ಹಬ್ಬದ ನಿಮಿತ್ತವಾಗಿ ಶ್ರೀ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನೆಲ್ಲೆಡೆ ಸುಖ ಶಾಂತಿ ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು.
ಬಳಿಕ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ಶ್ರೀಶೈಲ ಸೂರ್ಯಸಿಂಹಾಸನ ಮಠದ ಶ್ರೀ ಶ್ರೀ ಶ್ರೀ 1008 ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಗಳ ದಿವ್ಯಾಶೀರ್ವಾದ ಪಡೆದು, ಅವರು ನೀಡಿದ ಸತ್ಕಾರವನ್ನು ಸ್ವೀಕರಿಸಲಾಯಿತು.
ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ವೀರಭದ್ರೇಶ್ವರ ದೇಗುಲ ಸುಮಾರು 12ನೇ ಶತಮಾನದಲ್ಲಿ ಸ್ಥಾಪಿಸಲಾಗಿದೆ. ಪ್ರತಿನಿತ್ಯ ವೀರಭದ್ರನಿಗೆ ಭಕ್ತರ ಪರವಾಗಿ ಅಭಿಷೇಕ, ಬುಟ್ಟಿ ಪೂಜೆ, ಎಲೆ ಪೂಜೆ, ಅಕ್ಕಿ ಪೂಜೆ, ತುಲಾಭಾರ ಸೇವೆ ನೆರವೇರಿಸಲಾಗುತ್ತದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಈ ದೇಗುಲಕ್ಕೆ ಭಕ್ತರು ಆಗಮಿಸುತ್ತಿದ್ದು, ನಂಬಿದ ಭಕ್ತರ ಕೋರಿಕೆಯನ್ನು ಶ್ರೀ ದೇವರು ಈಡೇರಿಸುತ್ತಾರೆ ಎಂಬ ನಂಬಿಕೆಯಿದೆ.
ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ; ಸ್ವಪಕ್ಷದ ನಾಯಕರಿಂದಲೇ ಬಯಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ