ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧವೇ ಕೆಲ ರೈತ ಮುಖಂಡರು ತಿರುಗಿ ಬಿದ್ದಿದ್ದಾರೆ. ಭ್ರಷ್ಟಾಚಾರ, ಮಹಿಳೆಯರ ಆಸ್ತಿ ಲಪಟಾಯಿಸಿರುವುದು ಸೇರಿದಂತೆ ಹಲವು ಆರೋಪಗಳು ಕೋಡಿಹಳ್ಳಿ ವಿರುದ್ಧ ಕೇಳಿಬಂದಿದೆ.
ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ಧವೀರಪ್ಪ, ಕೋಡಿಹಳ್ಳಿ ಚಂದ್ರಶೇಖರ್ ಅವರ ಭ್ರಷ್ಟಾಚಾರದ ಆಡಿಯೋ ನನ್ನ ಬಳಿಯಿದೆ. ನೆರವು ಕೇಳಿದ್ದ ವಿದವಾ ಮಹಿಳೆಯ ಆಸ್ತಿಯನ್ನೇ ಕೋಡಿಹಳ್ಳಿ ಲಪಟಾಯಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶ್ರೀಧರ್ ಮಧ್ಯಸ್ಥಿಕೆಯಲ್ಲಿ 16 ಲಕ್ಷ ಪಡೆದುಕೊಂಡಿದ್ದಾರೆ. ಈ ಆಘಾತಗಳಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೇ ಕೆ.ಆರ್.ಮಾರುಕಟ್ಟೆ ವರ್ತಕರ ಪರ ಹೋರಾಟ ನಡೆಸಿದ್ದಕ್ಕಾಗಿ ವರ್ತಕರಿಂದ ಪ್ರತಿ ತಿಂಗಳು 60 ಸಾವಿರ ರೂಪಾಯಿ ಪಡೆಯುತ್ತಿದ್ದಾರೆ. ಕೋಡಿಹಳ್ಳಿ ಹೋರಾಟದ ಹೆಸರಿನಲ್ಲಿ ಹಣ ದೋಚುವ ದಂಧೆ ನಡೆಸುತ್ತಿದ್ದಾರೆ. ನೀರಾ ಸಹಕಾರಿ ಸಂಘದ ಹೆಸರಲ್ಲಿ ಶೇರ್ ಹಣ ಕಟ್ಟಿಸಿಕೊಂಡು ರೈತರಿಗೆ ಮೋಸ ಮಾಡಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ರೈತ ಸಂಘದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯೋಗ್ಯರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಶಾಕ್; ’ಕೋಟಿಗೊಬ್ಬ’ನಿಗಾಗಿ ಥಿಯೇಟರ್ ಮುಂದೆ ಕಾದು ಕಾದು ಸುಸ್ತಾದ ಜನರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ