ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಕೊಪ್ಪಳ ಜಿಲ್ಲೆಯ ನಾರಿನಾಳ ಗ್ರಾಮದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಈ ಕುರಿತು ಜಿಯೋಲೋಜಿಕಲ್ ಸರ್ವೆ ಆಫ್ ಇಂಡಿಯಾ ಮಹಿತಿ ನೀಡಿದೆ.
ಹಟ್ಟಿ ಚಿನ್ನದ ಗಣಿಯಿಂದ 70 ಕಿ.ಮೀ ದೂರದಲ್ಲಿರುವ ನಾರಿನಾಳ ಗ್ರಾಮದಲ್ಲಿ ಚಿನ್ನದ ನಿಕ್ಷೇಪಗಳು ಪತ್ತೆಯಾಗಿವೆ. ಗ್ರಾಮದಲ್ಲಿ 113 ಅಡಿ ಆಳದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪ ಪತ್ತೆ ಬಗ್ಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಹಲವು ದಿನಗಳಿಂದ ಅಧ್ಯಯನ ನಡೆಸಿತ್ತು. ಇದೀಗ ಚಿನ್ನದ ನಿಕ್ಷೇಪ ಇರುವುದು ಖಚಿತವಾಗಿದೆ.
ಆಯುಧ ಪೂಜೆ; ಇಂದು ಬಂಗಾರದ ಬೆಲೆ ಎಷ್ಟಿದೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ