ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಿಂಘು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ವೇದಿಕೆ ಬಳಿಯೇ ರೈತನೋರ್ವನನ್ನು ಬರ್ಬರವಾಗಿ ಹತ್ಯೆಗೈದು, ಬ್ಯಾರಿಕೇಡ್ ಗೆ ನೇಣು ಹಾಕಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಕೈ-ಕಾಲುಗಳನ್ನು ಕತ್ತರಿಸಿ 35 ವರ್ಷದ ರೈತನನ್ನು ಬೀಕರವಾಗಿ ಕೊಲೆಗೈದು ಪ್ರತಿಭಟನಾ ನಿರತ ರೈತರ ಮುಖ್ಯ ವೇದಿಕೆ ಬಳಿಯ ಬ್ಯಾರಿಕೇಡ್ ಗೆ ನೇಣು ಹಾಕಲಾಗಿದೆ. ಇಂದು ಮುಂಜಾನೆ 5 ಗಂಟೆಗೆ ಮೃತದೇಹ ಪತ್ತೆಯಾಗಿದ್ದು, ಕುಂಡ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕೃತ್ಯಯವನ್ನು ಯಾರು ಎಸಗಿದ್ದಾರೆಂಬ ಬಗ್ಗೆ ಮಾಹಿತಿ ಇಲ್ಲ. ಹತ್ಯೆಗೆ ಸಂಬಂಧಿಸಿದಂತೆಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಡಿಎಸ್ ಪಿ ಹಂಸರಾಜ್ ತಿಳಿಸಿದ್ದಾರೆ.
ಕನ್ನಡದ ಹಿರಿಯ ನಟ, ಲೇಖಕ ಪ್ರೊ.ಜಿ.ಕೆ.ಗೋವಿಂದ ರಾವ್ ಇನ್ನಿಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ