Latest

ಡಾ.ಮನಮೋಹನ್ ಸಿಂಗ್ ಗೆ ಡೆಂಗ್ಯೂ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅನಾರೋಗ್ಯಕ್ಕೀಡಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನಮೋಹನ್ ಸಿಂಗ್ ಡೆಂಗ್ಯೂ ದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಪ್ರಸ್ತುತ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ರಕ್ತದ ಪ್ಲೇಟ್ ಲೆಟ್ಸ್ ಕೂಡ ಸುಧಾರಿಸುತ್ತಿದೆ ಎಂದು ಏಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರ ಹಾಗೂ ನಿಶ್ಯಕ್ತಿಯಿಂದಾಗಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗಾವಿಯಲ್ಲಿ ಶನಿವಾರ ಕೊರೋನಾ ಬಿಗ್ ಜೀರೋ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button