ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದು, ಶಿಕ್ಷಣ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, 1ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸಲಾಗುವುದು. ಈ ಬಗ್ಗೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ದಸರಾ ಮುಗಿದ ಬಳಿಕ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧರಿಸುವುದಾಗಿ ಈ ಹಿಂದೆ ಶಿಕ್ಷಣ ಸಚಿವರು ಹೇಳಿದ್ದರು. ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಹಿನ್ನೆಲೆಯಲ್ಲಿ 1-5ನೇ ತರಗತಿಗಳ ಶಾಲೆಯನ್ನು ಆರಂಭಿಸುವ ಬಗ್ಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಬಗ್ಗೆ ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದರು. ಅದರಂತೆ ಇದೀಗ ಶೀಘ್ರದಲ್ಲೇ ಶಾಲೆ ಆರಂಭದ ಬಗ್ಗೆ ಸಿಎಂ ಕೂಡ ಸುಳಿವು ನೀಡಿದ್ದಾರೆ.
1-5ನೇ ತರಗತಿ ಶಾಲೆ ಪುನರಾರಂಭ; ಇಲ್ಲಿದೆ ಗೈಡ್ ಲೈನ್
ವಯಸ್ಕರ ಶಿಕ್ಷಣ ಯೋಜನೆಯಿದ್ದರೂ ಬೆಳೆಯದ ‘ಪಪ್ಪು’ವಿನ ಬುದ್ಧಿ; ಕಾಂಗ್ರೆಸ್ ಗೆ ತಿರುಗೇಟು ನೀಡಿದ ಬಿಜೆಪಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ