ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಖ್ಯಾತ ವಕೀಲ ಕೆ.ಎಸ್.ಎನ್ ರಾಜೇಶ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಎಲ್ ಎಲ್ ಬಿ ವಿದ್ಯಾರ್ಥಿನಿ ರಾಜೇಶ್ ಭಟ್ ವಿರುದ್ಧ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಮಂಗಳೂರು ಎಸಿಬಿ, ಲೋಕಾಯುಕ್ತಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ರಾಜೇಶ್ ಭಟ್, ಪ್ರಸಿದ್ಧ ಬ್ಯಾಂಕ್ ಗಳು ಸೇರಿ ಹಲವು ಕಂಪನಿಗಳಿಗೆ ಲೀಗಲ್ ಅಡ್ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜೇಶ್ ಕಚೇರಿಗೆ ವಿದ್ಯಾರ್ಥಿನಿ ಇಂಟರ್ನ್ ಶಿಪ್ ಗೆ ಬರುತ್ತಿದ್ದರು. ಈ ವೇಳೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ಸಂತ್ರಸ್ತೆ ಹಾಗೂ ವಕೀಲ ಮಾತನಾಡಿದ್ದಾರೆ ಎನ್ನಲಾದ 11 ನಿಮಿಷ 55 ಸೆಕೆಂಡುಗಳ ಆಡಿಯೋ ಕೂಡ ವೈರಲ್ ಆಗಿದೆ.
ರಾಜೇಶ್ ವಿರುದ್ಧ ಸಂತ್ರಸ್ತ ಯುವತಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಡಿಯೋ ವೈರಲ್ ಹಾಗೂ ಲೈಂಗಿಕ ದೌರ್ಜನ್ಯ ಹಿನ್ನೆಲೆಯಲ್ಲಿ ರಾಜೇಶ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ