Latest

ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ: ಸಿಎಂ ಬೊಮ್ಮಾಯಿ ಭರವಸೆ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ : ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಕವಾಯತು ಮೈದಾನ ದ‌ ಬಳಿ‌ ಆಯೋಜಿಸಿರುವ “ಪೋಲಿಸ್ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದ‌ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಹಿಳೆಯರ ಆತ್ಮರಕ್ಷಣೆಗಾಗಿ ತರಬೇತಿ ನೀಡುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕೆಎಸ್ ಆರ್ ಪಿ ಪಡೆ ಹಾಗೂ ಪೋಲಿಸ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳ ಸೇವೆ ಹಾಗೂ ಅನುಭವವನ್ನು ಬಳಸಿಕೊಂಡು ಈ ತರಬೇತಿಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ನಾಗರಿಕರ ಸುರಕ್ಷತೆಗಾಗಿ ಪೊಲೀಸರು ಮಾಡುವ ಸೇವೆ ತ್ಯಾಗವನ್ನು ಸ್ಮರಣೆ ಮಾಡಬೇಕು. ನಮ್ಮ ನಾಗರಿಕ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವಿದು. ಪೊಲೀಸರು ಜನಸ್ನೇಹಿ ಯಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕೇರಳ ಪ್ರವಾಹ:
ಕೇರಳ ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಆಗಿರುವ ಸಂಕಷ್ಟಕ್ಕೆ ರಾಜ್ಯದ ಜನತೆ ಹಾಗೂ ಕರ್ನಾಟಕ ಸರ್ಕಾರ ದಿಂದ ಎಲ್ಲಾ ರೀತಿಯ ಸಹಾಯ ಸಹಕಾರವನ್ನು ಒದಗಿಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಉತ್ತರಾಖಂಡದಲ್ಲಿ ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ತಂಡ:
ಉತ್ತರಾಖಂಡದಲ್ಲಿಯೂ ಉಂಟಾಗಿರುವ ಭೂಕುಸಿತ ಸಂಭವಿಸುತ್ತಿದೆ. ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರಿಗೆ ನೆರವು ಒದಗಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ಸಿಎಆರ್ ಮೈದಾನದಲ್ಲಿ ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಗೌರವ ಅರ್ಪಣೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ವಿಧಾನ‌ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕ ಪ್ರಸಾದ ಅಬ್ಬಯ್ಯ, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ ರೆಡ್ಡಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಉಪಸ್ಥಿತರಿದ್ದರು.
ಅಕ್ಷರ ದಾಸೋಹಕ್ಕೆ ಚಾಲನೆ ನೀಡಿದ ತಾಲೂಕಿನ ದಂಡಾಧಿಕಾರಿ ಡಾ ಡಿ ಹೆಚ್ ಹೂಗಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button