Latest

ಈ ಕಾರಣಕ್ಕೆ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ

ಪ್ರಗತಿವಾಹಿನಿ ಸುದ್ದಿ; ಜೈಪುರ: 7ನೇ ತರಗತಿ ವಿದ್ಯಾರ್ಥಿ ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಹಿಗ್ಗಾ ಮುಗ್ಗ ಥಳಿಸಿದ ಖಾಸಗಿ ಶಾಲೆ ಶಿಕ್ಷಕ ವಿದ್ಯಾರ್ಥಿಯನ್ನೇ ಕೊಂದು ಹಾಕಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ.

13 ವರ್ಷದ ಗಣೇಶ್ 7ನೇ ತರಗತಿ ಓದುತ್ತಿದ್ದ ಮೃತ ವಿದ್ಯಾರ್ಥಿ. ಹೋಂ ವರ್ಕ್ ಪೂರ್ಣಗೊಳಿಸಿಲ್ಲ ಎಂಬ ಕಾರಣಕ್ಕೆ ಶಿಕ್ಷಕ ಕೋಲಿನಿಂದ ಥಳಿಸಿದ್ದಾರೆ. ವಿದ್ಯಾರ್ಥಿ ತನ್ನನ್ನು ಹೊಡೆಯದಂತೆ ಬೇಡಿಕೊಂಡರೂ ಬಿಟ್ಟಿಲ್ಲ. ಶಿಕ್ಷಕನ ಹೊಡೆತಕ್ಕೆ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಸಲಸಾರ್ ಪೊಲೀಸ್ ಠಾಣೆಯ ಎಸ್ ಹೆಚ್ ಒ ಸಂದೀಪ್ ವೈಷ್ಣೋಯ್ ತಿಳಿಸಿದ್ದಾರೆ.

ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ರಾಜಸ್ಥಾನ ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋಟಾಸ್ರ ಶಿಕ್ಷಕನ ವಿರುದ್ಧ ಕ್ರಮಕ್ಕೆ ಸೂಚಿಸಿದ್ದು, ಶಾಲೆ ಮಾನ್ಯತೆಯನ್ನೇ ರದ್ದುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ.

ಬುಡಾ ಅಧ್ಯಕ್ಷರ ಹಠಾತ್ ಬದಲಾವಣೆ

Home add -Advt

Related Articles

Back to top button