Latest

ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ: ರಸ್ತೆಯ ತುರ್ತು ರಿಪೇರಿಗೆ ಸಚಿವ ಸಿ.ಸಿ.ಪಾಟೀಲ್ ತಾಕೀತು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ಒಂದು ಭಾಗದಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಹಾನಿಗೀಡಾಗಿರುವುದರಿಂದ ಅಲ್ಲಿ ಉಂಟಾಗಬಹುದಾದ ಅಪಾಯವನ್ನು ತಪ್ಪಿಸಬೇಕು ಮತ್ತು ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟು ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ನಾನು ಸೂಚಿಸಿದ್ದೇನೆ ಎಂದು ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಭಾರಿ ಮಳೆಯಿಂದ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಉಂಟಾದ ಭೂಕುಸಿತದ ವಗ್ಗೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಭೂಕುಸಿತದ ಬಗ್ಗೆ ತಾಂತ್ರಿಕ ವರದಿಯನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದಿದ್ದಾರೆ.

Home add -Advt

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಲೀ ಅಥವಾ ಹೆಚ್ಚಿನ ಆಸ್ತಿಪಾಸ್ತಿಯಾಗಲೀ ಹಾನಿಯಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ಆದರೆ ಅಲ್ಲಿ ಮುಂದೆ ಹೆಚ್ಚಿನ ಅವಘಡಗಳಾಗಬಾರದು ಎಂಬ ಮುನ್ನೆಚ್ಚರಿಕೆಯಿಂದ ಅಲ್ಲಿಯ ಬೃಹತ್ ನಂದಿ ಪ್ರತಿಮೆಗೆ ತೆರಳುವ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. (ಪ್ರಸ್ತುತ ಚಾಮುಂಡಿ ಬೆಟ್ಟಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ಇದರಿಂದ ಯಾವುದೇ ತೊಂದರೆ ಇರುವುದಿಲ್ಲ) ಆದ್ದರಿಂದ ದಯವಿಟ್ಟು ಆ ಭಾಗಕ್ಕೆ ತೆರಳುವ ಪ್ರವಾಸಿಗರು ಇದನ್ನು ಗಮನಿಸಿ ಸೂಕ್ತ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಮೈಸೂರಿನ ಜಿಲ್ಲಾ ಆಡಳಿತದ ಸೂಕ್ತ ಸಹಕಾರವನ್ನು ಪಡೆದುಕೊಂಡು ಆದ್ಯತೆಯ ಮೇರೆಗೆ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಬುಡಾ ಅಧ್ಯಕ್ಷರ ಹಠಾತ್ ಬದಲಾವಣೆ

Related Articles

Back to top button