ಪ್ರಗತಿವಾಹಿನಿ ಸುದ್ದಿ; ಮುಂಬೈ: ಅಸಹಜ ಲೈಂಗಿಕ ಕ್ರಿಯೆಗೆ ಒಪ್ಪದ ಪತ್ನಿಯ ಖಾಸಗಿ ಫೋಟೋಗಳನ್ನು ಪತಿಯೇ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ನೀಚ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ನಾಗ್ಪುರ ಮೂಲದ ವ್ಯಕ್ತಿ ತನ್ನ ಪತ್ನಿಗೆ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದು, ಪತ್ನಿ ನಿರಾಕರಿಸಿದ್ದಕ್ಕೆ ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾನೆ ಎನ್ನಲಾಗಿದೆ. ಇದೀಗ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಪತಿ ಮಹಾಶಯ ಅದಾಗಲೇ ಒಂದು ಮದುವೆಯಾಗಿದ್ದು, ಈ ವಿಷಯವನ್ನೂ ತನ್ನಿಂದ ಮುಚ್ಚಿಟ್ಟಿದ್ದಲ್ಲದೇ ಅಸಹಜ ಲೈಂಗಿಕ ಕ್ರಿಯಗೆ ಒತ್ತಾಯಿಸಿ, ಒಪ್ಪದಿದ್ದಾಗ ಸೋಶಿಯಲ್ ಮೀಡಿಯಾಗಳಲ್ಲಿ ತನ್ನ ಫೋಟೋ ಹರಿಬಿಟ್ಟಿದ್ದಾನೆ ಎಂದು ದೂರು ನೀಡಿದ್ದಾಳೆ. ಆಕೆಯ ವಯಸ್ಸು ಇನ್ನೂ ಕೇವಲ 21 ವರ್ಷ.
ಇಸ್ಲಾಂ ವಿಚ್ಛೇದನ ವಿಚಾರ; ಹೈಕೋರ್ಟ್ ಮಹತ್ವದ ತೀರ್ಪು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ