Latest

ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನಕ್ಕೆ ಅವಕಾಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಕಂಠೀರವ ಸ್ಟೇಡಿಯಂ ನಲ್ಲಿ ಸಿದ್ಧತೆ ನಡೆಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಈ ವಿಷಯ ತಿಳಿಸಿದ್ದು, ಅತಿ ಸಣ್ಣ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗ ಓರ್ವ ಮೇರು ನಟನನ್ನು ಕಳೆದುಕೊಂಡಿದೆ. ಹೃದಯಾಘಾತಕ್ಕೊಳಗಾಗಿದ್ದ ಪುನೀತ್ ರಾಜ್ ಕುಮಾರ್ ಅವರನ್ನು ಉಳಿಸಿಕೊಳ್ಳಲು ಕೊನೇ ಕ್ಷಣದವರೆಗೂ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಯಿತು. ಆದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡಿರುವುದು ಕನ್ನಡ ಚಿತ್ರರಂಗಕ್ಕೆ, ಇಡೀ ಕನ್ನಡ ನಾಡಿಗೆ ತುಂಬರಾದ ನಷ್ಟ ಎಂದು ದು:ಖ ವ್ಯಕ್ತಪಡಿಸಿದರು.

ಇಂದು ಸಂಜೆ 5 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಕಠೀರವ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಇಂದು ಸಂಜೆಯಿಂದ ನಾಳೆವರೆಗೂ ಸಾರ್ವಜನಿಕರಿಗೆ, ಪುನೀತ್ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು. ಅಭಿಮಾನಿಗಳು, ಕುಟುಂಬದವರು ಯಾವುದೇ ಉದ್ವೇಗಕ್ಕೆ ಒಳಗಾಗದೇ ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡಿದರು.

ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಕುಟುಂಬದ ಆಚಾರ ವಿಚಾರದಂತೆಯೇ ನೆರವೇರಿಸಲಾಗುವುದು ಎಂದು ತಿಳಿಸಿದರು.
ಗಾಜನೂರಿಗೆ ಹೋಗಿ ಬರುವೆನೆಂದು ಹೇಳಿ ಬಾರದ ಲೋಕಕ್ಕೆ ಪಯಣಿಸಿದ ಪವರ್ ಸ್ಟಾರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button