ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಡಿದು ಬಂದು ಗಲಾಟೆ ಮಾಡುತ್ತಿದ್ದುದನ್ನು ಪ್ರಶ್ನೆ ಮಾಡಿದ್ದಕ್ಕೆ ತಮ್ಮನೊಬ್ಬ ಅಣ್ಣನ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಟಿಳಕವಾಡಿಯಲ್ಲಿ ನಡೆದಿದೆ.
ತಮ್ಮನಿಂದ ಹಲ್ಲೆಗೊಳಗಾದ ಅಣ್ಣನನ್ನು ಪ್ರಕಾಶ್ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಪ್ರತಿದಿನ ಕುಡಿದು ಬಂದು ಜಗಳವಾಡುತ್ತಿದ್ದ ತಮ್ಮನ ಉಪಟಳ ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಅಣ್ಣ ಪ್ರಕಾಶ್ ಮೇಲೆಯೇ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.
ಕಂದಕಕ್ಕೆ ಉರುಳಿದ ಯುಟಿಲಿಟಿ ವಾಹನ; 13 ಜನರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ