
ಪ್ರಗತಿವಾಹಿನಿ ಸುದ್ದಿ; ಮುಂಬೈ: ಅಕ್ರಮ ಹಣವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಇಡಿ ಅಧಿಕಾರಿಗಳು ಬಧಿಸಿದ್ದಾರೆ.
ಪ್ರಕರಣ ಸಂಬಂಧ ವಿಚಾರಣೆಗಾಗಿ ಇಡಿ ಕಚೇರಿಗೆ ಹಾಜರಾಗಿದ್ದ ದೇಶಮುಖ್ ಅವರನ್ನು ಸತತ 12 ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಬೆಳಗಿನ ಜಾವ ಅಧಿಕೃತವಾಗಿ ಬಂಧಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆ ಸೆಕ್ಷನ್ 19ರ ಅಡಿಯಲ್ಲಿ ದೇಶಮುಖ್ ಅವರನ್ನು ಬಂಧಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು 5 ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಆದರೆ 6ನೇ ಬಾರಿ ನೋಟೀಸ್ ಹಿನ್ನೆಲೆಯಲ್ಲಿ ನಿನ್ನೆ ದೇಶಮುಖ್ ವಿಚಾರಣೆಗೆ ಹಾಜರಾಗಿದ್ದರು.
ಮುಂಬೈ ಮಾಜಿ ಪೊಲೀಸ್ ಕಮೀಷ್ನರ್ ಪರಮ್ ಬೀರ್ ಸಿಂಗ್ ದೇಶಮುಖ್ ವಿರುದ್ಧ 100 ಕೋಟಿ ಲಂಚದ ಆರೋಪ ಮಾಡಿದ್ದರು. ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಾಗಿತ್ತು. ಬಾಂಬೆ ಹೈಕೋರ್ಟ್ ದೇಶಮುಖ್ ವಿರುದ್ಧ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಅನಿಲ್ ದೇಶಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಉಪಚುನಾವಣಾ ಫಲಿತಾಂಶ; ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ