ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಶಾಕ್ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸಧ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಹೈಕಮಾಂಡ್ ನಿಂದ ನನಗೆ ಯಾವುದೇ ಬುಲಾವ್ ಬಂದಿಲ್ಲ. ನಾನು ಸಧ್ಯಕ್ಕೆ ದೆಹಲಿಗೆ ಹೋಗುತ್ತಿಲ್ಲ. ಸಂಪುಟ ವಿಸ್ತರಣೆ ಸಧ್ಯಕ್ಕಿಲ್ಲ ಎಂದು ತಿಳಿಸಿದರು.
ಉಪಚುನಾವಣೆ ಮುಗಿದ ಬೆನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಗೆ ಪ್ರಯಾಣಿಸುತ್ತಿದ್ದು, ಸಚಿವ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಬಿಜೆಪಿ ವರಿಷ್ಠರ ಜೊತೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಸಂಪುಟ ವಿಸ್ತರಣೆ ಸಧ್ಯಕ್ಕಿಲ್ಲ ಎಂದು ಸಿಎಂ ಸ್ಪಷ್ಟಪಡಿಸುವ ಮೂಲಕ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಾದರೂ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಕಸರತ್ತು ನಡೆಸುತ್ತಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾದಂತಾಗಿದೆ.
ಪಿಸಿ ನೇಮಕ ಪರೀಕ್ಷೆಯಲ್ಲಿ ನಕಲು ಪ್ರಕರಣ; ಸಿಐಡಿಗೆ ಹಾಸ್ತಾಂತರಕ್ಕೆ ಬೆಳಗಾವಿ ಪೊಲೀಸರಿಗೆ ಆದೇಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ