ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಲದಿನಗಳಿಂದ ತಣ್ಣಗಾಗಿದ್ದ ಮಳೆ ರಾಯ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಇಂದಿನಿಂದ ಮತ್ತೆ ಆರ್ಭಟಿಸಲಿದ್ದಾನೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ.
ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಇಂದಿನಿಂದ ಮಂಗಳವಾರದವೆಗೆ ವ್ಯಾಪಕ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಒಟ್ಟಾರೆ ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕ, ಕೇರಳ, ತಮಿಳುನಾಡು, ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಟ್ ಕಾಯಿನ್ ಪ್ರಕರಣ; ಐಷಾರಾಮಿ ಹೋಟೆಲ್ ನಲ್ಲಿ ತಂಗಿದ್ದ ಆರೋಪಿ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ