ಪ್ರಗತಿವಾಹಿನಿ ಸುದ್ದಿ; ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ)ದಿಂದ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ಇಡಿ ಕಸ್ಟಡಿ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ಇಡಿ ವಶದಲ್ಲಿರುವ ಮಾಜಿ ಸಚಿವ ಅನಿಲ್ ದೇಶ್ ಮುಖ್ ಅವರನ್ನು ತಮ್ಮ ಕಸ್ಟಡಿಗೆ ನೀಡುವಂತೆ ಸಿಬಿಐ ಕೂಡ ಮನವಿ ಮಾಡಿದೆ. ಈ ನಡುವೆ ಅನಿಲ್ ದೇಶ್ ಮುಖ್ ಅವರನ್ನು ಹೆಚ್ಚಿನ ವಿಚಾರಣೆಗೊಳಪಡಿಸುವ ನಿಟ್ಟಿನಲ್ಲಿ ಇನ್ನಷ್ಟು ದಿನಗಳ ಕಾಲ ತಮ್ಮ ಕಸ್ಟಡಿಗೆ ವಹಿಸುವಂತೆ ಇಡಿ ಅಧಿಕಾರಿಗಳು ಬಾಂಬೆ ಹೈಕೋರ್ಟ್ ಗೆ ಮನವಿ ಮಾಡಿದ್ದು, ಇಡಿ ಮನವಿ ಪುರಸ್ಕರಿಸಿದ ನ್ಯಾಯಾಲಯ ನವೆಂಬರ್ 12ರವರೆಗೂ ಇಡಿ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.
ಇನ್ನು ಇಡಿ ಅಧಿಕಾರಿಗಳ ವಿಚಾರಣೆ ಮುಗಿಯುತ್ತಿದ್ದಂತೆ ದೇಶ್ ಮುಖ್ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಅನಿಲ್ ದೇಶ್ ಮುಖ್ ವಿರುದ್ಧ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಭ್ರಷ್ಟಾಚಾರ ಮತ್ತು ಸುಲಿಗೆ ಆರೋಪ ಮಾಡಿದ್ದರು.
ಮತ್ತೆ ಎದುರಾದ 2015ರ ಪ್ರವಾಹ ಭೀತಿ; ಮಹಾ ಮಳೆಗೆ ಚೆನ್ನೈ ಜಲಾವೃತ; ರೆಡ್ ಅಲರ್ಟ್ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ