ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಕುಂಭದ್ರೋಣ ಮಳೆಗೆ ತಮಿಳುನಾಡು ತತ್ತರಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದ ಉಂಟಾದ ಅವಾಂತರದಲ್ಲಿ ಈವರೆಗೆ ನಾಲ್ವರು ಸಾವನ್ನಪ್ಪಿದ್ದಾರೆ.
ಇಂದೂ ಕೂಡ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚೆನ್ನೈನ ಬಹುತೇಕ ರಸ್ತೆಗಳು ಜಲಾವೃತಗೊಂಡಿದ್ದು, 70ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. ಪರಿಹಾರ ಕೇಂದ್ರಗಳಲ್ಲಿ 5000ಕ್ಕೂ ಹೆಚ್ಚು ಜನ ಆಶ್ರಯ ಪಡೆದಿದ್ದಾರೆ.
ತಮಿಳುನಾಡಿನಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚೆನ್ನೈ, ಚೆಂಗಲ್ಪಟ್ಟು, ತಿರುವಳ್ಲೂರು, ಕಾಂಚೀಪುರಂ, ವಿಲ್ಲುಪುರಂ, ನಾಗಪಟ್ಟಣಂ, ಕಡಲೂರು, ಮೈಲಡುತುರೈ, ತಿರುವಾರೂರ್, ತಂಜಾವೂರು, ಪುದುಕೊಟ್ಟೈ, ರಾಮನಾಥಪುರಂ, ಶಿವಗಂಗೈ, ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ