ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಕ್ಕಳ ಕೈಯಲ್ಲಿ ಕೆಲಸ ಮಾಡಿಸುವ ಮೂಲಕ ಪುರಸಭೆ ಅಧಿಕಾರಿಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿರುವ ಘಟನೆ ಬೆಳಗಾವಿ ಜಿಲ್ಲೆ ಮುಗಳಖೋಡ ಪುರಸಭೆಯಲ್ಲಿ ಬೆಳಕಿಗೆ ಬಂದಿದೆ.
ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತ ಫೋಟೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಮಕ್ಕಳ ಕೈಯಲ್ಲಿ ಕಸದ ಬಾಕ್ಸ್ ಗಳನ್ನು ಹೊರಿಸಿ ಕೆಲಸ ಮಾಡಿಸಿಕೊಂಡಿದ್ದಾರೆ ಎಂದು ಸ್ಥಳೀಯರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ವಿಧಾನಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ