ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಸುಲಿಗೆ ಆರೋಪದ ಪ್ರತಿ ದೂರು ಕುರಿತ ವರದಿಗಳನ್ನು ಪರಿಶೀಲಿಸುವಂತೆ ಹೈಕೋರ್ಟ್ ಬೆಂಗಳೂರು ಪೊಲೀಸ್ ವಿಶೇಷ ತನಿಖಾ ತಂಡದ ಮುಖ್ಯಸ್ಥರಿಗೆ ಸೂಚಿಸಿದೆ.
ಪ್ರಕರಣದ ವರದಿಯನ್ನು ಎಸ್ ಐಟಿ ಹೈಕೋರ್ಟ್ ಗೆ ಸಲ್ಲಿಸಿದಾಗ ಅವುಗಳನ್ನು ಕೆಳ ಅಥವಾ ಅಧೀನ ನ್ಯಾಯಾಲದಲ್ಲಿ ಸಲ್ಲಿಸಲು ಅನುಮತಿ ಕೋರಿತ್ತು. ವೈಯಕಿಕ ಕಾರಣಗಳಿಂದಾಗಿ ಮೇಯಿಂದ ಜುಲೈವರೆಗೆ ತನಿಖೆಯ ಪ್ರಮುಖ ಭಾಗದ ಸಂದರ್ಭದಲ್ಲಿ ಎಸ್ ಐಟಿ ಮುಖ್ಯಸ್ಥರು ರಜೆಯ ಮೇಲೆ ತೆರಳಿದ್ದರು. ಈ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡಿದೆ.
ಎಸ್ ಐಟಿ ತನಿಖೆಯ ಅಂತಿಮ ವರದಿಯನ್ನು ನ್ಯಾಯಾಲಯದ ಮುಂದೆ ಸಲ್ಲಿಸಲು ರಾಜ್ಯ ಅಡ್ವಕೇಟ್ ಜನರಲ್ ಮಾಡಿದ ಮನವಿ ತಿರಸ್ಕರಿಸಿದ ಹೈಕೋರ್ಟ್, ಶಾಸಕರ ವಿರುದ್ಧದ ಅತ್ಯಾಚಾರ ಆರೋಪ ಹಾಗೂ ಶಾಸಕರು ಮಾಡಿದ ಸುಲಿಗೆ ಆರೋಪಗಳ ಸಮಾನಾಂತರ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ ಐಟಿ ಮುಖ್ಯಸ್ಥರು ತನಿಖಾ ವರದಿಯನ್ನು ಪರಿಶೀಲಿಸಿ ವರದಿಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯವನ್ನು ಸಲ್ಲಿಸಲು ಹೇಳಿದೆ. ಅಲ್ಲದೇ ಪ್ರಕರಣದ ವಿಚಾರಣೆಯನ್ನು ನ.29ಕ್ಕೆ ಮುಂದೂಡಿದೆ.
ಬಿಟ್ ಕಾಯಿನ್ ಕೇಸ್; ಸಿಎಂ ಬಲಿ ಪಡೆಯುತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ