Latest

ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದ ಹ್ಯಾಕರ್ ಶ್ರೀಕಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿರುವ ಬಿಟ್ ಕಾಯಿನ್ ದಂಧೆ ಆರೋಪಿ, ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

ಹೋಟೆಲ್ ನಲ್ಲಿ ನದೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧನಕ್ಕೀಡಾಗಿದ್ದ ಶ್ರೀಕಿಯನ್ನುನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಈಗ ಆದರೀಗ ಎರಡೇ ದಿನದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾನೆ.

ಬಿಡುಗಡೆ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಕಿ, ಬಿಟ್ ಕಾಯಿನ್ ಪ್ರಕರಣದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನಾನು ಅಂತಹ ಯಾವ ಕೆಲಸವನ್ನೂ ಮಾಡಿಲ್ಲ. ನನಗೆ ಜಾಮೀನು ಕೊಟ್ಟವರು ಯಾರು ಎಂಬುದೂ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾನೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಆರೋಪದ ಬಗ್ಗೆ ನನಗೆ ಗೊತ್ತಿಲ್ಲ. ಇದೆಲ್ಲವೂ ಸುಮ್ಮನೆ ಮೀಡಿಯಾ ಹೈಪ್. ಇದ್ಯಾವುದೂ ಕೂಡ ನನಗೆ ಗೊತ್ತಿಲ್ಲ. ನಾನು ಅಂತಹ ಯಾವ ಕೆಲಸವನ್ನೂ ಮಾಡಿಲ್ಲ ಎಂದು ಹೇಳಿದ್ದಾನೆ.

ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನಾಯಕರ ಹೆಸರು; ಪ್ರಿಯಾಂಕ್ ಖರ್ಗೆ ಗೆ ತಿರುಗೇಟು ನೀಡಿದ ಸಿಎಂ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button