ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದೆ.
ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಆಕಾಂಕ್ಷಿಗಳ ಪೈಪೋಟಿ ನಡೆಯುತ್ತಿದೆ. ಹಾಗಾಗಿ ಪಟ್ಟಿ ಅಂತಿಮಗೊಳಿಸುವ ಕಸರತ್ತು ನಡೆಯುತ್ತಿದೆ. ಹಾಲಿ ಸದಸ್ಯರಿಗೆ ಬಹುತೇಕ ಎಲ್ಲ ಕಡೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದೆ. 6 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಅಧಿಕೃತ ಘೋಷಣೆಯಾಗಬೇಕಿದೆ.
ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಲು 5 -6 ಜನರು ಕಸರತ್ತು ನಡೆಸುತ್ತಿದ್ದಾರೆ. ಸಧ್ಯಕ್ಕೆ ಹಾಲಿ ಸದಸ್ಯ ಮಹಾಂತೇಶ ಕವಟಗಿಮಠ ಅವರ ಹೆಸರು ಅಂತಿಮಗೊಳಿಸಲಾಗಿದ್ದು, ಇನ್ನೊಂದು ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ತೀರ್ಮಾನವಾಗಿಲ್ಲ.
ಮಾಹಿತಿಯ ಪ್ರಕಾರ ನವದೆಹಲಿಯಲ್ಲಿ ಪಟ್ಟಿ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಪಟ್ಟಿ ಹೀಗಿದೆ:
ದಕ್ಷಿಣ ಕನ್ನಡ: ಕೋಟಾ ಶ್ರೀನಿವಾಸ ಪೂಜಾರಿ, ಕಲಬುರಗಿ: ಬಿ.ಜಿ. ಪಾಟೀಲ್ , ಧಾರವಾಡ – ಪ್ರದೀಪ್ ಶೆಟ್ಟರ್, ಚಿಕ್ಕಮಗಳೂರು– ಎಂ.ಕೆ. ಪ್ರಾಣೇಶ್, ಕೊಡಗು– ಸುನೀಲ್ ಸುಬ್ರಹ್ಮಣಿ ಮಂಡೇಪಂಡ, ಬೆಳಗಾವಿ – ಮಹಂತೇಶ್ ಕವಟಗಿಮಠ ಸ್ಪರ್ಧೆ ನಡೆಸಲಿದ್ದಾರೆ.
ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ.
ರಾಜ್ಯ ಸರ್ಕಾರದ ಆದೇಶದಂತೆ ರಸ್ತೆ ಕಾಮಗಾರಿ ನಡೆದಿದೆ ಎಂದ ಜಿಲ್ಲಾಧಿಕಾರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ