ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ವೈರಸ್ ಅಟ್ಟಹಾಸ ಕೊಂಚ ತಣ್ಣಗಾಗುತ್ತಿದ್ದಂತೆ ಇದೀಗ ಕೇರಳದಲ್ಲಿ ಹೊಸ ವೈರಸ್ ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಆತಂತ ಹೆಚ್ಚಿಸಿದೆ.
ಕೇರಳದಲ್ಲಿ ನೊರೊವೈರಸ್ ಎಂಬ ಹೊಸ ವೈರಸ್ ಪತ್ತೆಯಾಗಿದ್ದು, ವಯನಾಡ್ ನ ಹಲವು ಜನರು ಈ ಸೋಂಕಿನಿಂದ ಬಳಲುತ್ತಿದ್ದಾರೆ. ಕಳೆದ ಎರದು ವಾರಗಳಲ್ಲಿ 13 ಜನರಲ್ಲಿ ನೊರೊವೈರಸ್ ದೃಢಪಟ್ಟಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಹೊಸ ಸೋಂಕಿನ ಬಗ್ಗೆ ಜನರು ಹೆಚ್ಚು ಜಾಗೃತರಾಗಿರಬೇಕು. ಪ್ರಾಣಿಗಳಿಂದ ಈ ರೋಗ ಹರಡುತ್ತಿದ್ದು, ಅತಿಸಾರ, ಜ್ವರ, ಹೊಟ್ಟೆನೋವು, ವಾಂತಿ, ತಲೆನೋವು ಈ ಸೋಂಕಿನ ಲಕ್ಷಣಗಳಾಗಿದ್ದು, ಇಂಥ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಚಿಕಿತ್ಸೆ ಪಡೆದುಕೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.
ಖಾಸಗಿ ಶಾಲೆಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ