Latest
ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಸಂಕಷ್ಟ; 5 ಕೋಟಿ ಮೌಲ್ಯದ 2 ವಾಚ್ ಸೀಜ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರ ದುಬಾರಿ ಬೆಲೆಯ ಎರಡು ವಾಚ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಹಾರ್ದಿಕ್ ಪಾಂಡ್ಯ ಅವರ ಬರೋಬ್ಬರಿ 5 ಕೋಟಿ ಮೌಲ್ಯದ ಎರಡು ವಾಚ್ ಗಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಈ ಘಟನೆ ನಡೆದಿದೆ.
ಮಾಹಿತಿ ಪ್ರಕಾರ ವಾಚ್ ಗಳನ್ನು ಲಗೇಜ್ ನಲ್ಲಿ ಇಟ್ಟುಕೊಂಡು ಹಾರ್ದಿಕ್ ಪಾಂಡ್ಯ ಆಗಮಿಸಿದ್ದರು. ಲಗೇಜ್ ನಲ್ಲಿ ದುಬಾರಿ ವಾಚ್ ಇರುವ ಬಗ್ಗೆ ಮೊದಲೇ ಮಾಹಿತಿ ನೀಡಿರಲಿಲ್ಲ. ಅಲ್ಲದೇ ವಾಚ್ ಗೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳೂ ಇರಲಿಲ್ಲ. ಹಾಗಾಗಿ ಎರಡೂ ವಾಚ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ




