Latest

ರಾಜ್ಯಾದ್ಯಂತ ಭಾರಿ ಮಳೆ ಎಚ್ಚರಿಕೆ; ಹಲವೆಡೆ ಕಟ್ಟೆಚ್ಚರ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ನಾಲ್ಕೈದು ದಿನಗಳಲ್ಲಿ ರಾಜ್ಯದ ಹಲವೆಡೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥಗೊಂಡಿದೆ. ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಈ ನಡುವೆ ಇಂದಿನಿಂದ ಮತ್ತೆ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದ್ದು, ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ನದಿಗೆ ಉರುಳಿದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಅಧಿಕಾರಿಗಳ ದುರ್ಮರಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button