Latest

ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ವರುಣನ ಅಬ್ಬರ ಹೆಚ್ಚುತ್ತಿದ್ದು, ನವೆಂಬರ್ 23 ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳು, ಅಪಾರ ಪ್ರಮಾಣದ ಬೆಳೆಗಳು, ಕೃಷಿ ಭೂಮಿ ಜಲಾವೃತಗೊಂಡಿದ್ದು, ರೈತರು ಕಂಗಾಲಾಗಿದ್ದಾರೆ.

Home add -Advt

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ನ.24ರವರೆಗೂ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಔಷಧಿ ಕೊಡುವುದಾಗಿ ಹೇಳಿ ವಂಚನೆ; ಇಬ್ಬರು ಯುವಕರ ಬಂಧನ

Related Articles

Back to top button