Latest

ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಜಿಲ್ಲಾಡಳಿತಕ್ಕೆ ನೀಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು ಎರಡು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇತರ ಜಿಲ್ಲೆಗಳಲ್ಲೂ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ನ.23ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮುಂಜಾಗೃತಾ ಕ್ರಮವಾಗಿ ಸುತ್ತೋಲೆ ಹೊರಡಿಸಿದೆ.
ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Home add -Advt

Related Articles

Back to top button