ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥಗೊಂಡಿದ್ದು, ಇನ್ನೂ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಮನೆಗಳು ಕುಸಿದುಬಿದ್ದುದ್ದು, ಕೃಷಿ ಭೂಮಿ ಜಲಾವೃತಗೊಂಡಿವೆ. ಮಳೆ ಸಂಕಷ್ಟದಿಂದಾಗಿ ಈವರೆಗೆ ರಾಜ್ಯದಲ್ಲಿ ಐವರು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಗೋಡೆ ಕುಸಿದು 24 ವರ್ಷದ ಮಹಿಳೆ ಹಾಗೂ ಚಳ್ಳಕೆರೆ ತಾಲೂಕಿನಲ್ಲಿ ಮನೆ ಕುಸಿದು ಬಿದ್ದು ದಂಪತಿಗಳಿಬ್ಬರು ಸಾವನ್ನಪ್ಪಿದ್ದಾರೆ.
ಕೋಲಾರ ಜಿಲ್ಲೆಯ ಕೆಂದಟ್ಟಿ ಗ್ರಾಮದಲ್ಲಿ ಮನೆ ಕುಸಿದುಬಿದ್ದ ಪರಿಣಾಮ 50 ವರ್ಷದ ಪ್ರಭಾಕರ ಎಂಬುವವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಮಳೆ ಅವಾಂತರದಿಂದಾಗಿ ಒಟ್ಟು ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೂ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮಳೆ ಹಾನಿ, ಪರಿಹಾರ ಕ್ರಮ, ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಜಿಲ್ಲಾಡಳಿತಗಳ ಸಭೆ ನಡೆಸಲಿದ್ದಾರೆ.
ಇದು ಅನ್ನದಾತನ ಹೋರಾಟಕ್ಕೆ ಸಿಕ್ಕ ಜಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ