ಪ್ರಗತಿವಾಹಿನಿ ಸುದ್ದಿ; ಚೆನ್ನೈ: ತಮಿಳುನಾಡಿನಾದ್ಯಂತ ಕೆಲದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆಗೆ ಮನೆ ಗೋಡೆ ಕುಸಿದ ಪರಿಣಾಮ ಒಂದೇ ಕುಟುಂಬದ 9 ಜನರು ಸಾವನ್ನಪ್ಪಿರುವ ಘಟನೆ ವೆಲ್ಲೂರು ಜಿಲ್ಲೆಯ ಪೆರ್ನಂಪಟ್ಟು ಪ್ರದೇಶದಲ್ಲಿ ನಡೆದಿದೆ.
ಮನೆಯಲ್ಲಿ ಕುಟುಂಬದ 13 ಜನರು ವಾಸವಾಗಿದ್ದರು, ಮಳೆ ಅವಾಂತರದಿಂದಾಗಿ ಗೋಡೆ ಕುಸಿದುಬಿದ್ದಿದ್ದು, ನಾಲ್ವರು ಮಹಿಳೆಯರು, ನಾಲ್ವರು ಮಕ್ಕಳು ಹಾಗೂ ಓರ್ವ ಪುರುಷ ಸೇರಿದಂತೆ ಕುಟುಂಬದ 9 ಜನರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ದು:ಖ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಮೃತರ ಸಂಬಂಧಿಕರಿಗೆ ತಲಾ 5 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.
ವರುಣಾರ್ಭಟಕ್ಕೆ ಕರುನಾಡು ತತ್ತರ; ಐವರು ಬಲಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ