Latest

ಡ್ರಗ್ಸ್ ಪ್ರಕರಣ: ಪ್ರತಿಷ್ಠಿತ ಕಾಲೇಜಿನ 5 ವಿದ್ಯಾರ್ಥಿಗಳ ಬಂಧನ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕೊರೊನಾ ಸಂಕಷ್ಟ ಕಡಿಮೆಯಾದ ಬೆನ್ನಲ್ಲೇ ಶಾಲಾ-ಕಾಲೇಜುಗಳು ಪುನರಾರಂಭವಾಗಿದ್ದು, ಮಂಗಳೂರಿನಲ್ಲಿ ಡ್ರಗ್ಸ್ ಜಾಲಗಳು ಸಕ್ರಿಯವಾಗಿವೆ ಎಂಬ ಮಾತು ಕೇಳಿಬರುತ್ತಿದೆ.

ಡ್ರಗ್ಸ್ ಸೇವನೆಯಲ್ಲಿ ತೊಡಗಿದ್ದ ಕೇರಳ ಮೂಲದ ಐವರು ವಿದ್ಯಾರ್ಥಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಮಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾಗಿದ್ದು, ವಿದ್ಯಾರ್ಥಿಗಳು ರೆಡ್ ಹ್ಯಾಂಡ್ ಆಗಿ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. 20 ವರ್ಷದ ರುತಿನ್ ಕಣ್ಣೂರು, ಅಕ್ಷಯ್ ಕೋಝಿಕ್ಕೋಡ್, 19 ವರ್ಷದ ಅಕ್ಷಯ್, ಮಾರ್ಟಿನ್ ಶಾಜಿ, 22 ವರ್ಷದ ಹರಿಕೃಷ್ಣನ್ ಕೆ.ಆರ್ ಬಂಧಿತ ವಿದ್ಯಾರ್ಥಿಗಳು.

ಕೇರಳ ಮೂಲದ ಡ್ರಗ್ಸ್ ಮಾಫಿಯಾ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ದ್ರಗ್ಸ್ ಪೂರೈಕೆ ಮಾಡುತ್ತಿದೆ ಎಂಬ ಬಗ್ಗೆ ಕೆಲ ದಿನಗಳಿಂದ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ದೇಶದ ಟಾಪ್ 10 ಮಾದರಿ ಠಾಣೆಗಳ ಪಟ್ಟಿಯಲ್ಲಿ ರಾಜ್ಯದ ಮಾನ್ವಿ ಪೊಲೀಸ್ ಠಾಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button