ಪ್ರಗತಿವಾಹಿನಿ ಸುದ್ದಿ; ಜೈಪುರ: ರಾಜಸ್ಥಾನ ನೂತನ ಸಚಿವರ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಲೋಕೋಪಯೋಗಿ ಇಲಾಖೆಯ ಅಭಿಯಾನದಲ್ಲಿ ಮಾತನಾಡಿದ ರಾಜಸ್ಥಾನ ಸಚಿವರು, ರಸ್ತೆಗಳು ಬಾಲಿವುಡ್ ನಟಿ ಕತ್ರಿನಾ ಕೈಫ್ ಕೆನ್ನೆಯಂತಾಗಬೇಕು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಪಾಂಖ್ ಗ್ರಾಮ ಅಭಿಯಾನ ಸಭೆಯಲ್ಲಿ ಮಾತನಾಡಿದ ಸಚಿವ ರಾಜೇಂದ್ರ ಸಿಂಗ್, ರಸ್ತೆಗಳನ್ನು ಹೇಮಾ ಮಾಲಿನಿ ಕೆನ್ನೆಯಂತೆ ಮಾಡಬೇಕು ಎಂದು ಹೇಳಿದರು. ನಂತರ ಈಗ ಹೇಮಾ ಮಾಲಿನಿ ಅವರಿಗೆ ವಯಸ್ಸಾಗಿದೆ. ಹಾಗಾಗಿ ಈಗಿನ ಖ್ಯಾತ ನಟಿಯಾರು ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಸಭಿಕರು ಕತ್ರಿನಾ ಕೈಫ್ ಎಂದು ಉತ್ತರಿಸಿದ್ದಾರೆ. ಹಾಗಾದರೆ ರಸ್ತೆಗಳು ಕತ್ರಿನಾ ಕೈಫ್ ಕೆನ್ನೆಯಂತೆ ನುಣುಪಾಗಿರಬೇಕು ಎಂದಿದ್ದಾರೆ.
ಸಚಿವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಚಿವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಮನೆಯ ಪೈಪ್ ಗಳಲ್ಲೂ ಕಂತೆ ಕಂತೆ ಹಣ; ಬಕೆಟ್ ನಲ್ಲಿ ಮೊಗೆದು ರಾಶಿ ಹಾಕಿದ ACB ಅಧಿಕಾರಿಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ