
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಇನ್ಸ್ ಪೆಕ್ಟರ್ ಮಾರುತಿ ವಿರುದ್ಧ ತನಿಖೆ ನಡೆಸುವಂತೆ 8ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ರಮೇಶ್ ಜಾರಕಿಹೊಳಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಯುವತಿ ದೂರು ನೀಡಿದ್ದಳು. ಆದರೆ ಕಬ್ಬನ್ ಪಾರ್ಕ್ ಪೊಲೀಸರು ಎಫ್ ಐ ಆರ್ ದಾಖಲಿಸದೇ ನಿರ್ಭಯ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ ಅಧ್ಯಕ್ಷ ಆದರ್ಶ ಅಯ್ಯರ್ ಪಿಸಿ ಆರ್ ದಾಖಲಿಸಿದ್ದರು. ಈ ದೂರಿನ ಆಧಾರದ ಮೇರೆಗೆ ಮೂವರು ಅಧಿಕಾರಿಗಳ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿದೆ.
ಎಸಿಬಿ ದಾಳಿ; ಜೈಲುಪಾಲಾದ ಶಾಂತಗೌಡ; ಕಾರಣ ಗೊತ್ತೇ?