Latest

ಒಂದೇ ದಿನದಲ್ಲಿ 79,051 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಜರ್ಮನಿ: ಮತ್ತೆ ಕೊರೊನಾ ಅಟ್ಟಹಾಸ ಆರಂಭವಾಗಿದ್ದು, ಜರ್ಮನಿಯಲ್ಲಿ 24 ಗಂಟೆಯಲ್ಲಿ ಬರೋಬ್ಬರಿ 79,051 ಜನರಲ್ಲಿ ಸೋಂಕು ಕಂಡುಬಂದಿದೆ.

ಕೇವಲ 8 ಕೋಟಿ ಜನಸಂಖ್ಯೆಯಿರುವ ಜರ್ಮನಿಯಲ್ಲಿ ಒಂದೇ ದಿನದಲ್ಲಿ 79,051 ಜನರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 1 ಲಕ್ಷ ಗಡಿ ದಾಟಿದೆ.

Home add -Advt

ಆರಂಭದಲ್ಲಿ ಇಡೀ ಯುರೋಪ್ ನಲ್ಲಿಯೇ ಜರ್ಮನಿ ಕೊರೊನಾ ನಿಯಂತ್ರಣದಲ್ಲಿತ್ತು. ಆದರೆ ದಿನದಿಂದ ದಿನಕ್ಕೆ ಜರ್ಮನಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲಾರಂಭಿಸಿದೆ. 5 ಕೋಟಿ 66 ಲಕ್ಷ ಜನ ವ್ಯಾಕ್ಸಿನ್ ಪಡೆದುಕೊಂಡಿದ್ದರೂ ಜರ್ಮನಿಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದೆ. ಸುಮಾರು 80 ಸಾವಿರ ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿರುವುದು ಇಡೀ ವಿಶ್ವಕ್ಕೆ ಮತ್ತೊಮ್ಮೆ ಎಚ್ಚರಿಕೆ ಸಂದೇಶವಾಗಿದೆ.
ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

Related Articles

Back to top button