Latest

ನವೆಂಬರ್ 26ಕ್ಕೆ ಮತ್ತೊಂದು ಸೈಕ್ಲೋನ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಕ್ಕೆ ನವೆಂಬರ್ 26ರಂದು ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು,ಚೆನ್ನೈಗೆ ಅಪ್ಪಳಿಸಲಿರುವ ಸೈಕ್ಲೋನ್ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ಮೈಸೂರು, ಉಡುಪಿ, ಕರಾವಳಿ ಭಾಗ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಚಂಡಮಾರುತದ ಪರಿಣಾಮ ಬೀರಲಿದ್ದು, ನ.26ರಿಂದ 28ರವರೆಗೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದರು.

ವಿಧಾನಪರಿಷತ್ ಚುನಾವಣೆಗೆ ಈಗಾಗಲೇ ನಾಮಪತ್ರಗಳು ಸಲ್ಲಿಕೆಯಾಗಿವೆ. ಹಾಗಾಗಿ ಡಿಸಿಗಳು ಸೈಕ್ಲೋನ್ ಕಡೆಗೆ ಗಮನಹರಿಸಬೇಕಿದೆ. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಈಗಾಗಲೇ ಮಳೆಯಿಂದ ಮನೆ ಹಾನಿಯಾಗಿದ್ದರೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಬೆಳೆ ಪರಿಹಾರವನ್ನೂ ನೀಡಲಾಗುವುದು. ಮಳೆ ಹಾನಿ ಕುರಿತು ನ.30ರೊಳಗೆ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ವರದಿ ಬಂದ ಬಳಿಕ 10 ದಿನಗಳೊಳಗೆ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಒಂದೇ ದಿನದಲ್ಲಿ 79,051 ಜನರಲ್ಲಿ ಕೊರೊನಾ ಸೋಂಕು ಪತ್ತೆ

Home add -Advt

Related Articles

Back to top button