ಪ್ರಗತಿವಾಹಿನಿ ಸುದ್ದಿ; ಹಾಸನ: ವಿದ್ಯಾರ್ಥಿನಿಯೊಬ್ಬಳು ಅಮ್ಮನಿಗೆ ಮೆಸೇಜ್ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ.
9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ 15 ವರ್ಷದ ಪೂರ್ವಿಕಾ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಸತ್ಯಮಂಗಲ ಬಡಾವಣೆಯ ಪ್ರಸಾದ್ ಹಾಗೂ ಸುಬ್ಬುಲಕ್ಷ್ಮಿ ಎಂಬುವವ ಪುತ್ರಿ ಪೂರ್ವಿಕಾ.
ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನನ್ನು ಕ್ಷಮಿಸಿ ಎಂದು ಅಮ್ಮನ ಮೊಬೈಲ್ ಗೆ ಪೂರ್ವಿಕಾ ಮೆಸೇಜ್ ಕಳುಹಿಸಿದ್ದಾಳೆ. ಬಳಿಕ ಮನೆಯಿಂದ ಹೊರಹೋದ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಪ್ರಬಲ ಭೂಕಂಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ