
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, B.1.1.529 ರೂಪಾಂತರಿ ವೈರಸ್ ಇದಾಗಿದ್ದು, ಒಮಿಕ್ರೋನ್ ಎಂದು ಹೆಸರಿಸಲಾಗಿದೆ. ರೂಪಾಂತರಿ ವೈರಸ್ ವೇಗವಾಗಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಕೊರೊನಾ ಡೆಲ್ಟಾ ಎರಡನೇ ಅಲೆಯಲ್ಲಿ ವ್ಯಾಪಕವಾಗಿ ಹರಡಿತ್ತು. ಈಗ ಹೊಸದಾಗಿ ಒಮಿಕ್ರೋನ್ ಕಾಣಿಸಿಕೊಂಡಿದ್ದು, ಸಮುದಾಯಕ್ಕೆ ವೇಗವಾಗಿ ಹರಡುತ್ತದೆ ಎನ್ನುವ ಮಾಹಿತಿ ಇದೆ. ರೂಪಾಂತರಿ ವೈರಸ್ ಇರುವ ದೇಶದಿಂದ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗೆ ಒಳಪಡಿಸಿ ಪಾಸಿಟಿವ್ ಬಂದರೆ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ ಎಂದರು.
ಇನ್ನೂ 45 ಲಕ್ಷ ಜನರು 2ನೇ ಡೋಸ್ ಲಸಿಕೆಯನ್ನು ಪಡೆದಿಲ್ಲ. ಅವಧಿ ಮುಗಿದಿದ್ದರೂ ಲಸಿಕೆ ಪಡೆಯದೇ ಉದಾಸೀನ ಮಾಡುತ್ತಿರುವುದು ಸರಿಯಲ್ಲ. ಇದರಿಂದ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ. ಲಸಿಕೆ ಪಡೆಯದವರು ತಕ್ಷಣ ಲಸಿಕೆ ಪಡೆಯಬೇಕು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಹೊಸ ರೂಪಾಂತರಿ ವೈರಸ್ ಕುರಿತಾಗಿಯೂ ತಜ್ಞರೊಂದಿಗೆ ಕೇಂದ್ರ ಸರ್ಕಾರ ಸಭೆ ನಡೆಸುತ್ತಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಭಿಕ್ಷುಕಿ ಮೇಲೆ ಅತ್ಯಾಚಾರ; ಹೆಂಡತಿಯಾಬೇಕೆಂದು ನಾಟಕವಾಡಿದ ಕಾಮುಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ