Latest

ನಟ ಅರ್ಜುನ್ ಸರ್ಜಾಗೆ ಕ್ಲೀನ್ ಚಿಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಆರೋಪಕ್ಕೆ ಕ್ಲೀನ್ ಚಿಟ್ ಸಿಕ್ಕಂತಾಗಿದೆ. ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷಾಧಾರಗಳು ಸಿಗದ ಹಿನ್ನೆಲೆಯಲ್ಲಿ ಕ್ಲೀನ್ ಚಿಟ್ ಸಿಕ್ಕಿದ್ದು, ನಟನಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಮಾಡಿದ್ದರು. ಸಿನಿಮಾ ಚಿತ್ರೀಕರಣದ ವೇಳೆ ತನಗೆ ಕಿರುಕುಳ ನೀಡಿದ್ದಾಗಿ 2018ರಲ್ಲಿ ಶೃತಿ ಹರಿಹರನ್, ಅರ್ಜುನ್ ಸರ್ಜಾ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದೀಗ ಮೂರು ವರ್ಷದ ಬಳಿಕವೂ ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷಿ ಸಿಗದ ಕಾರಣ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಅರ್ಜುನ್ ಸರ್ಜಾಗೆ ಪ್ರಕರಣದಿಂದ ಕ್ಲೀನ್ ಚಿಟ್ ಸಿಕ್ಕಿದೆ ಎಂದು ತಿಳಿದುಬಂದಿದೆ.
ಮೀಟೂ ಪ್ರಕರಣ; ನಟಿ ಶೃತಿ ಹರಿಹರನ್ ಗೆ ನೋಟೀಸ್ ಜಾರಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button